Ad Code

ಉಚಿತ ಅಂಜಿಯೋಪ್ಲಾಸ್ಟಿ ಕಾರ್ಯಾಗಾರ

 
ಯಲ್ಲಾಪುರ: ಜಯದೇವ ಆಸ್ಪತ್ರೆಯ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮೆಕ್ಟ್ರಾನಿಕ್ಸ್ ಅಮೇರಿಕಾ, ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಶನ್, ವಿಸ್ಕಿನ್‌ಸನ್ ಅಮೇರಿಕಾ ಅವರ ಸಹಯೊಗದೊಂದಿಗೆ ಜೂನ್24 ರಿಂದ 26 ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಉಚಿತ ಅಂಜಿಯೋಪ್ಲಾಸ್ಟಿ ಕಾರ್ಯಾಗಾರ ಹಾಗೂ 150 ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆಯ್ದ 150 ಬಡ ರೋಗಿಗಳ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರೋಗಿಗಳಿಗೆ ಉನ್ನತ ಗುಣಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಅಳವಡಿಸಲಾಗುವುದು. ಆಸಕ್ತ ರೋಗಿಗಳು ತಮ್ಮ ಹೆಸರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಯ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9 ನೇ ಬ್ಲಾಕ್ ಇಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 9480827888 ಅಥವಾ 080-22977433 / 22977322 ಸಂಖ್ಯೆಗಳಿಗೆ ಸಂಪರ್ಕಿಸಬಹುದು.

Post a Comment

0 Comments