Ad Code

ಫೆಬ್ರವರಿ ಹಾಗೂ ಮಾರ್ಚ್-2022 ನೇ ಮಾಹೆಗಳ ಹಾಲಿನ ಪ್ರೋತ್ಸಾಹಧನ ಜಮಾ

ಫೆಬ್ರವರಿ ಹಾಗೂ ಮಾರ್ಚ್ 2022 ನೇ ಮಾಹೆಗಳ ಸರ್ಕಾರದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ರೂ. 5 ಪ್ರೋತ್ಸಾಹಧನವು ಆಧಾರ ಜೋಡಣೆಯಾದ ಹಾಲು ಉತ್ಪಾದಕ ರೈತರ ಬ್ಯಾಂಕ್‌ ಖಾತೆಗೆ ದಿನಾಂಕ 02.06.2022 ರ ಗುರುವಾರ ರಂದು ಜಮಾ ಆಗಿದ್ದು ಸರಕಾರದಿಂದ ಹಾಲು ಉತ್ಪಾದಕ ರೈತರ ಖಾತೆಗೆ ಜಮಾ ಆಗಬೇಕಿದ್ದ ಕಳೆದ ಸಹಕಾರಿ ವರ್ಷದ ಫೆಬ್ರವರಿ ಹಾಗೂ ಮಾರ್ಚ್ ಮಾಹೆಗಳ ರೂ. 5 ಪ್ರೋತ್ಸಾಹಧನವು ಈಗ ಪೂರ್ಣಗೊಂಡಿದೆ ಎಂದು ಧಾರವಾಡ ಸಹಕಾರ ಹಾಲು ಒಕ್ಕೂಟದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರು ಹಾಗೂ ಒಕ್ಕೂಟದ ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಏಪ್ರಿಲ್-2022‌ ನೇ ಮಾಹೆಯ ವರೆಗಿನ ಪ್ರೋತ್ಸಾಹಧನದ ಮಾಹಿತಿಯನ್ನು ನಮ್ಮಿಂದ ಕ್ಷೀರಸಿರಿ ತಂತ್ರಾಶದಲ್ಲಿ ಈಗಾಗಲೇ ಅಳವಡಿಸಲಾಗಿದ್ದು, ಮೇ-2022 ನೇ ಮಾಹೆಯ ರೂ. 5 ಪ್ರೋತ್ಸಾಹಧನದ ಮಾಹಿತಿಯನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಾಹಕರಿಂದ ಪಡೆಯಲಾಗುತ್ತಿದ್ದು, ಶೀಘ್ರದಲ್ಲಿಯೇ ಮೇ-2022 ನೇ ಮಾಹೆಯ ರೂ. 5 ಪ್ರೋತ್ಸಾಹಧನದ ಮಾಹಿತಿಯನ್ನು ಕ್ಷೀರಸಿರಿ ತಂತ್ರಾಶದಲ್ಲಿ ಅಳವಡಿಸಲಾಗುವುದು ಎಂದರು. ಏಪ್ರಿಲ್-2022 ನೇ ಮಾಹೆಯ ಪ್ರೋತ್ಸಾಹಧನವು ಕೂಡ ಶೀಘ್ರದಲ್ಲೇ ರೈತರ ಬ್ಯಾಂಕ್‌ ಖಾತೆಗೆ ಸರ್ಕಾರದಿಂದ ಜಮಾ ಆಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ಹಾಗೂ ಪ್ರೋತ್ಸಾಹಧನ ಜಮಾ ಆಗದ ರೈತರು ಆಯಾ ವ್ಯಾಪ್ತಿಯ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದರು. Post a Comment

0 Comments