Ad Code

ಕೌಶಲ್ಯವಿರುವ ಶಿಕ್ಷಣವನ್ನು ನೀಡಲು ಹೊಸ ಶಿಕ್ಷಣ ನೀತಿ ಸಹಕಾರಿ: ಕಾಗೇರಿ

 
ಶಿರಸಿ: ಹೆಗಡೆಕಟ್ಟಾ ಹೈಸ್ಕೂಲ್ ಸುವರ್ಣ ಮಹೋತ್ಸವ ವರ್ಷಾಚರಣೆ ಚಾಲನೆ ನೀಡಿದ ವಿಧಾನ ಸಭಾಧ್ಯಕ್ಷ ಕಾಗೇರಿ ಕೌಶಲ್ಯವಿರುವ ಶಿಕ್ಷಣವನ್ನು ನೀಡಲು ಹೊಸ ಶಿಕ್ಷಣ ನೀತಿ ಸಹಕಾರಿಯಾಗಿದೆ, ಶಿಕ್ಷಣದಿಂದ ಕೌಶಲ್ಯ ಬೆಳವಣಿಗೆ ಆಗಬೇಕಿದೆ ಹಣ ಗಳಿಸುವುದನ್ನು ಪ್ರೋತ್ಸಾಹಿಸುವುದೇ ಶಿಕ್ಷಣದ ಗುರಿಯಲ್ಲ ಎಂದು ಹೇಳಿದರು. ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಿದೆ, ಇದಕ್ಕೆ ಹೊಸ ಶಿಕ್ಷಣ ನೀತಿ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಶಿರಸಿಯ ಹೆಗಡೆಕಟ್ಟಾ ಶ್ರೀ ಗಜಾನನ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಸವಿನೆನಪಿನ "ಸುವರ್ಣ ಸುರಭಿ" ನೂತನ ಸಭಾಭವನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಹೊಸ ಶಿಕ್ಷಣ ನೀತಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯಾಗುತ್ತದೆ. ಹೊಸ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರು ಅಧ್ಯಯನ ಮಾಡಬೇಕು. ಕೌಶಲ್ಯಪೂರ್ಣ ಶಿಕ್ಷಣ 6ನೇ ತರಗತಿಯಿಂದಲೆ ಮಕ್ಕಳಿಗೆ ಹೊಸ ಶಿಕ್ಷಣ ನೀತಿಯಿಂದ ಸಿಗುತ್ತದೆ ಎಂದರು.

ಅಧ್ಯಕ್ಷ ಎಂ.ಆರ್. ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಕಟ್ಟಡ ನಿರ್ಮಾಣಕ್ಕೆ ಹಳೇ ವಿದ್ಯಾರ್ಥಿಗಳ ಸಹಕಾರವೂ ಇದೆ, ಹಳೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಹಾಯ ಹಸ್ತ ಚಾಚಿದ್ದಾರೆ ಅಂತೆಯೇ ನಮ್ಮ ಶಾಲೆಯ ವಿದ್ಯಾರ್ಥಿಗಳು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದರು. ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆರ್.ಡಿ. ಹೆಗಡೆ, ಹೆಗಡೆಕಟ್ಟಾ ಗ್ರಾಪಂ ಅಧ್ಯಕ್ಷೆ ವೀಣಾ ಭಟ್, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ವಿ.ಪಿ. ಹೆಗಡೆ, ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಪಿ. ಹೆಗಡೆ, ಕೊಟ್ಟೆಗದ್ದೆ ಆಡಳಿತ ಮಂಡಳಿ ಉಪಾಧ್ಯಕ್ಷೆ ವನಿತಾ ಹೆಗಡೆ, ಜಿಲ್ಲಾ ಪಂಚಾಯತ್‌ ಇಂಜಿನಿಯರಿಂಗ್ ವಿಭಾಗ ದ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ ಜಾಗೀರದಾರ, ಪ್ರೌಢಶಾಲೆ ಮುಖ್ಯಾಧ್ಯಾಪಕ ಶೈಲೇಂದ್ರ ಎಂ ಎಚ್ ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments