Hot Posts

6/recent/ticker-posts

ಕ್ರೀಡೆಯಲ್ಲಿ ಲಯನ್ಸ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಶಿರಸಿ: ದಿನಾಂಕ 27/09/2023 ರಂದು ಶಾಲಾ ಶಿಕ್ಷಣ ಇಲಾಖೆ ಮತ್ತು ಕೆ.ಪಿ.ಸಿ ಗಣೇಶಗುಡಿ, ದಾಂಡೇಲಿ ಇವರ ಸಹಯೋಗದಲ್ಲಿ ನಡೆಸಲಾದ 14 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಶಟಲ್ ಮತ್ತು ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ನಮ್ಮ ಲಯನ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಬಾಲಕಿಯರ ಶಟಲ್ ಸ್ಪರ್ಧೆಯಲ್ಲಿ ಅಂಶಿಕಾ ಅಶ್ವಥ ಹೆಗಡೆ, ತ್ವಿಶಾ ಹೆಗಡೆ, ಖುಷಿ ಸುನೀಲ್ ಶೆಟ್ಟಿ, ನಿಶಾ ಪ್ರಸನ್ನ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 

 ಬಾಲಕರ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಹರ್ಷಿತ್ ನಾಗರಾಜ ಜೋಗಳೇಕರ್, ಶ್ರವಣ ಮಾದರ, ಅಮೇಯ ವಾಯ್, ತೇಜಸ್ ರಾಮ ಕಬ್ಬೆರ್, ಅರ್ಜುನ್ ಹೆಗಡೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ವಿದ್ಯಾರ್ಥಿಗಳು ಶಾಲೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಚೇತನಾ ಪಾವಸ್ಕರ್ ಮತ್ತು ನಾಗರಾಜ ಜೋಗಳೇಕರ್ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಹಾಗೂ ಸಾಧನೆಗೆ ಸಹಕರಿಸಿದ ಪಾಲಕರಿಗೆ, ತರಬೇತುದಾರರಿಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಮುಖ್ಯಾಧ್ಯಾಪಕರು, ಶಿಕ್ಷಕ-ಶಿಕ್ಷಕೇತರ ವೃಂದ, ಶಿರಸಿ ಲಯನ್ಸ್ ಕ್ಲಬ್ ಬಳಗ ಮತ್ತು ಪಾಲಕರ ವೃಂದ ಅಭಿನಂದಿಸಿದ್ದಾರೆ.

Post a Comment

0 Comments